Anganavadi Requerment In 2025: ಮಹಿಳೆಯರಿಗೆ ಸಿಹಿ ಸುದ್ದಿ ಅಂಗನವಾಡಿಯಲ್ಲಿ ಭರ್ಜರಿ ನೇಮಕಾತಿ! ಈಗಲೇ ಅರ್ಜಿ ಸಲ್ಲಿಸಿ.
ಈಗ ಕರ್ನಾಟಕ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಈಗ ರಾಜ್ಯದ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಖಾಲಿ ಇರುವಂತಹ ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕ ಹುದ್ದೆಗಳಿಗೆ ನೇಮಕಾತಿಗಳನ್ನು ಬಿಡುಗಡೆ ಮಾಡಿದ್ದು, ಅರ್ಹರು ಈ ಕೂಡಲೇ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.

ಈಗ ಈ ಒಂದು ನೇಮಕಾತಿ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಹೊಂದಿರುವ ಪ್ರತಿಯೊಬ್ಬ ಮಹಿಳೆಯರಿಗೆ ಈಗ ಸ್ಥಳೀಯವಾಗಿ ಉದ್ಯೋಗವನ್ನು ಒದಗಿಸುವುದರ ಜೊತೆಗೆ ಸಮಾಜ ಸೇವೆಯಲ್ಲಿ ಭಾಗಿಯಾಗುವಂತ ಅವಕಾಶವನ್ನು ನೀಡುತ್ತಾ ಇದೆ.
ಹುದ್ದೆಯ ಮಾಹಿತಿ
ಈಗ ಈ ಒಂದು ಅಂಗನವಾಡಿ ಕೇಂದ್ರಗಳು ಸರ್ಕಾರದ ಸಮಗ್ರ ಶಿಶು ಅಭಿವೃದ್ಧಿ ಯೋಜನೆಯ ಭಾಗವಾಗಿ ಬೇಗ ಗ್ರಾಮೀಣ ಭಾಗದ ಮಕ್ಕಳ ಪೌಷ್ಟಿಕ ಆರೋಗ್ಯ ಮತ್ತು ಶಿಕ್ಷಣದ ಜೊತೆಗೆ ಮಹಿಳೆಯರ ಸಬಲೀಕರಣವನ್ನು ಉತ್ತೇಜಿಸುವಂತಹ ಗುರಿಯನ್ನು ಹೊಂದಿದೆ. ಈಗ ಅಂಗನವಾಡಿ ಕೇಂದ್ರಗಳು ತಾಯಿ ಮತ್ತು ಮಗುವಿನ ಆರೈಕೆಗೆ ಕೇಂದ್ರ ಬಿಂದುವಾಗಿದ್ದು. ಅಂಗನವಾಡಿ ಕಾರ್ಯಕರ್ತೆಯವರು ಮತ್ತು ಸಹಾಯಕರು ಈ ಒಂದು ಯೋಜನೆಯಲ್ಲಿ ಯಶಸ್ಸಿನ ಪ್ರಮುಖ ಪಾತ್ರವನ್ನು ವಹಿಸುತ್ತಾರೆ.
ಈಗ ಈ ಒಂದು ಇಲಾಖೆಯಲ್ಲಿ ಖಾಲಿ ಇರುವಂತ ಒಟ್ಟು ಹುದ್ದೆಗಳ ಸಂಖ್ಯೆ 627 ಈ ಒಂದು ಹುದ್ದೆಗಳಲ್ಲಿ ಈಗ ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿ ಹುದ್ದೆಗಳು ಖಾಲಿ ಇದ್ದು. ಈಗ ಕೊಡಗು, ಚಿಕ್ಕಮಂಗಳೂರು ಮತ್ತು ಹಾವೇರಿ ಜಿಲ್ಲೆಗಳು ಈ ಒಂದು ಹುದ್ದೆಗಳು ಖಾಲಿ ಇವೆ.
ಶೈಕ್ಷಣಿಕ ಅರ್ಹತೆ ಏನು?
ಈಗ ಈ ಒಂದು ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಅರ್ಜಿ ಸಲ್ಲಿಕೆ ಮಾಡುವಂತಹ ಅಭ್ಯರ್ಥಿಗಳು ಪಿಯುಸಿ ಅಥವಾ SSLC ಪಾಸ್ ಆಗಿರಬೇಕು. ಆನಂತರ ಅಂಗನವಾಡಿ ಸಹಾಯಕಿ ಹುದ್ದೆಗಳಿಗೆ ಕನಿಷ್ಠ ಎಸ್ ಎಸ್ ಎಲ್ ಸಿ ಅವರು ಕಡ್ಡಾಯವಾಗಿ ಪಾಸ್ ಆಗಿರಬೇಕು.
ವಯೋಮಿತಿ ಏನು?
ಈಗ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡುವಂತ ಮಹಿಳಾ ಅಭ್ಯರ್ಥಿಗಳಿಗೆ ಕನಿಷ್ಠ 19 ವರ್ಷ ಹಾಗೂ ಗರಿಷ್ಠ 35 ವರ್ಷದವರೆಗೆ ಅವರು ವಯಸ್ಸನ್ನು ಹೊಂದಿರಬೇಕಾಗುತ್ತದೆ.
ಬೇಕಾಗುವ ದಾಖಲೆಗಳು ಏನು?
- ಆಧಾರ್ ಕಾರ್ಡ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಜನನ ಪ್ರಮಾಣ ಪತ್ರ
- ನಿವಾಸ ಪ್ರಮಾಣ ಪತ್ರ
- SSLC ಅಂಕಪಟ್ಟಿಗಳು
- ಪಾಸ್ಪೋರ್ಟ್ ಅಳತೆಯ ಭಾವಚಿತ್ರ
ಅರ್ಜಿ ಸಲ್ಲಿಸುವುದು ಹೇಗೆ?
- ಈಗ ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಸಲು ಈ ಕೆಳಗಿನ ಅಧಿಕೃತ ವೆಬ್ ಸೈಟ್ ಗೆ ಮೊದಲು ಭೇಟಿಯನ್ನು ನೀಡಿ.
- ಆನಂತರ ಅದರಲ್ಲಿ ರಿಕ್ವೈರ್ಮೆಂಟ್ ನೋಟಿಫಿಕೇಶನ್ ವಿಭಾಗವನ್ನು ಆಯ್ಕೆ ಮಾಡಿಕೊಳ್ಳಿ.
- ಆನಂತರ ಸ್ನೇಹಿತರೆ ನಿಮಗೆ ಸಂಬಂಧಿತ ಜಿಲ್ಲೆಯ ಮೇಲೆ ನೀವು ಕ್ಲಿಕ್ ಮಾಡಿಕೊಳ್ಳಿ.
- ಆನಂತರ ಆ ಒಂದು ಹುದ್ದೆಗೆ ಬೇಕಾಗುವಂತಹ ಅಗತ್ಯ ಮಾಹಿತಿಗಳನ್ನು ಸರಿಯಾದ ರೀತಿಯಲ್ಲಿ ಭರ್ತಿ ಮಾಡಿ ದಾಖಲೆಗಳನ್ನು ಅಪ್ಲೋಡ್ ಮಾಡಿ.
- ನೀವು ಅರ್ಜಿಯನ್ನು ಸಲ್ಲಿಕೆ ಮಾಡಿದ ನಂತರ ಅದನ್ನು ಒಂದು ಪ್ರಿಂಟನ್ನು ತೆಗೆದುಕೊಳ್ಳಿ ಇಟ್ಟುಕೊಳ್ಳಿ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 17.11.2025