SBI Asha Scholarship For All Students: ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ? SBI ಆಶಾ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಪ್ರಾರಂಭ!
ಈಗ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ತನ್ನ ಫೌಂಡೇಶನ್ ನ ಮೂಲಕ ಆರ್ಥಿಕವಾಗಿ ಹಿಂದುಳಿದಂತ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಈಗ ಶಿಕ್ಷಣಕ್ಕೆ ಬೆಂಬಲವನ್ನು ನೀಡುವ ಉದ್ದೇಶದಿಂದ ಆಶಾ ವಿದ್ಯಾರ್ಥಿವೇತನ ಕಾರ್ಯಕ್ರಮವನ್ನು ಈಗ ಜಾರಿಗೆ ಮಾಡಿದೆ. ಈ ಒಂದು ಕಾರ್ಯಕ್ರಮ ನಮ್ಮ ಭಾರತಾದ್ಯಂತ 9ನೇ ತರಗತಿಯಿಂದ ಸ್ನಾತಕೋತ್ತರ ಮತ್ತು ವೃತ್ತಿಪರ ಕೋರ್ಸ್ ಗಳಲ್ಲಿ ವಿದ್ಯಾಭ್ಯಾಸ ಮಾಡುವ ಪ್ರತಿಯೊಬ್ಬ ವಿದ್ಯಾರ್ಥಿಗಳಿಗೆ ಆರ್ಥಿಕ ಸಹಾಯವನ್ನು ನೀಡಲಾಗುತ್ತದೆ.
2015 ರಲ್ಲಿ ಸ್ಥಾಪಿತವಾದಂತ ಈ ಒಂದು ಎಸ್ ಬಿ ಐ ಫೌಂಡೇಶನ್ ಶಿಕ್ಷಣ ಕ್ಷೇತ್ರದಲ್ಲಿ ಸಾಮಾಜಿಕ ಜವಾಬ್ದಾರಿಯನ್ನು ತೋರಿಸುವ ಉದ್ದೇಶದಿಂದ ಈ ಒಂದು ವಿದ್ಯಾರ್ಥಿ ವೇತನವನ್ನು ಬಿಡುಗಡೆ ಮಾಡಲಾಗಿದೆ. ಈ ಒಂದು ವಿದ್ಯಾರ್ಥಿ ವೇತನಕ್ಕೆ ಈಗ ಆನ್ಲೈನ್ ಮೂಲಕ ಅರ್ಜಿ ಮಾಡಬಹುದು.
SBI ಆಶಾ ವಿದ್ಯಾರ್ಥಿ ವೇತನದ ಮಾಹಿತಿ
ಈಗ ಎಸ್ ಬಿ ಐ ಆಶಾ ವಿದ್ಯಾರ್ಥಿವೇತನದ ಕಾರ್ಯಕ್ರಮ ಆರ್ಥಿಕವಾಗಿ ದುರ್ಬಲ ವರ್ಗದ ವಿದ್ಯಾರ್ಥಿಗಳಿಗೆ ಈಗ ಶಿಕ್ಷಣದಲ್ಲಿ ಅವರು ತಮ್ಮ ವಿದ್ಯಾಭ್ಯಾಸವನ್ನು ಯಾವುದೇ ರೀತಿಯಾದಂತಹ ಆರ್ಥಿಕ ಪರಿಸ್ಥಿತಿ ತೊಂದರೆ ಇಲ್ಲದೆ ಅವರು ತಮ್ಮ ಶಿಕ್ಷಣ ಪಡೆದುಕೊಳ್ಳುವ ಉದ್ದೇಶದಿಂದ ಈ ಒಂದು ವಿದ್ಯಾರ್ಥಿ ವೇತನವನ್ನು ಬಿಡುಗಡೆ ಮಾಡಲಾಗಿದೆ.
ಈಗ ಈ ಒಂದು ವಿದ್ಯಾರ್ಥಿ ವೇತನಕ್ಕೆ ಆಯ್ಕೆಯಾದಂತಹ ವಿದ್ಯಾರ್ಥಿಗಳಿಗೆ ಈಗ ವಾರ್ಷಿಕವಾಗಿ 15,000 ದಿಂದ 20 ಲಕ್ಷದವರೆಗೆ ಆರ್ಥಿಕ ಸಹಾಯ ನೀಡಲಾಗುತ್ತದೆ. ಈಗ ಈ ಒಂದು ವೇತನ 9ನೇ ತರಗತಿಯಿಂದ ಪ್ರಾರಂಭವಾದಂತ ಪದವಿ ವೃತ್ತಿಪರ ಕೋರ್ಸ್ ಗಳು ಹಾಗೂ ವಿದೇಶದಲ್ಲಿ ಶಿಕ್ಷಣ ಪಡೆಯುವ ಪ್ರತಿಯೊಬ್ಬ ವಿದ್ಯಾರ್ಥಿಗಳು ಅರ್ಜಿ ಸಲ್ಲಿಕೆ ಮಾಡಬಹುದು. ಹಾಗೆ ಎಸ್ಸಿ ಎಸ್ಟಿ ವಿದ್ಯಾರ್ಥಿಗಳಿಗೆ ಅಂಕಗಳಲ್ಲಿ 10% ಮತ್ತು ಮಹಿಳಾ ಅಭ್ಯರ್ಥಿಗಳಿಗೆ 50% ವಿನಾಯಿತಿಯನ್ನು ನೀಡಲಾಗಿದೆ.
ಅರ್ಹತೆಗಳು ಏನು?
- ಈಗ ಅರ್ಜಿ ಸಲ್ಲಿಕೆ ಮಾಡಲು 9ನೇ ತರಗತಿಯಿಂದ ಸ್ನಾತಕೋತ್ತರ ವೃತ್ತಿಪರ ಕೋರ್ಸ್ ಹಾಗು ವಿದೇಶದಲ್ಲಿ ಶಿಕ್ಷಣವನ್ನು ಪಡೆಯುತ್ತಿರಬೇಕು.
- ಹಾಗೆ ಕುಟುಂಬದ ವಾರ್ಷಿಕ ಆದಾಯ 3 ಲಕ್ಷದ ಒಳಗೆ ಇರಬೇಕಾಗುತ್ತದೆ.
- ಅರ್ಜಿದಾರರು ಭಾರತದ ಖಾಯಂ ನಿವಾಸಿ ಆಗಿರಬೇಕು.
- ಹಾಗೆ ಇಂದಿನ ಶೈಕ್ಷಣಿಕ ಪರೀಕ್ಷೆಯಲ್ಲಿ ಕನಿಷ್ಠ 75% ಅಂಕಗಳನ್ನು ಗಳಿಸಬೇಕು.
ಬೇಕಾಗುವ ದಾಖಲೆಗಳು ಏನು?
- ಆಧಾರ್ ಕಾರ್ಡ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಪೋಷಕರ ಬ್ಯಾಂಕ್ ಖಾತೆ ವಿವರ
- ಇತ್ತೀಚಿನ ಭಾವಚಿತ್ರ
- ಇಂದಿನ ವರ್ಷದ ಶೈಕ್ಷಣಿಕ ಅಂಕ ಪಟ್ಟಿಗಳು
- ಕಾಲೇಜು ಪ್ರವೇಶ ಪಡೆದ ಪ್ರವೇಶ ಪತ್ರ
ಅರ್ಜಿ ಸಲ್ಲಿಸುವುದು ಹೇಗೆ?
- ಈ ಸ್ಕಾಲರ್ಶಿಪ್ ಅರ್ಜಿ ಸಲ್ಲಿಸಲು ಅಧಿಕೃತ ವೆಬ್ ಸೈಟ್ ಗೆ ಮೊದಲು ಭೇಟಿಯನ್ನು ನೀಡಬೇಕಾಗುತ್ತದೆ.
- ಆನಂತರ ನೀವು ರಿಜಿಸ್ಟರ್ ಅಥವಾ ಈಗಾಗಲೇ ಖಾತೆ ಇದ್ದರೆ ಲಾಗಿನ್ ಮಾಡಬೇಕಾಗುತ್ತದೆ.
- ಆನಂತರ ನೀವು ಅದರಲ್ಲಿ ಎಸ್ ಬಿ ಐ ಪ್ಲಾಟಿನಮ್ ಜುಬ್ಲಿ ಆಶಾ ಸ್ಕಾಲರ್ಶಿಪ್ ಆಯ್ಕೆ ಮೇಲೆ ಕ್ಲಿಕ್ ಮಾಡಿ.
- ಆನಂತರ ಅದರಲ್ಲಿರುವ ಪ್ರತಿಯೊಂದು ದಾಖಲೆಗಳನ್ನು ಭರ್ತಿ ಮಾಡಿ.
- ಆನಂತರ ಅದಕ್ಕೆ ಬೇಕಾಗಿರುವಂತಹ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ.
- ಆನಂತರ ಎಲ್ಲಾ ದಾಖಲೆಗಳನ್ನು ಪರಿಶೀಲನೆ ಮಾಡಿ ಸಬ್ಮಿಟ್ ಬಟನ್ ಮೇಲೆ ಕ್ಲಿಕ್ ಮಾಡಿ.